ಮತ್ತಾಯ 6:5-6
ಮತ್ತಾಯ 6:5-6 KANJV-BSI
ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.