YouVersion Logo
Search Icon

ಮತ್ತಾಯ 6

6
1ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು.
2ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3ನೀನಾದರೆ ಧರ್ಮಕೊಡುವಾಗ ನೀನು ಧರ್ಮಕೊಟ್ಟದ್ದು ಅಂತರಂಗವಾಗುವ ಹಾಗೆ ನಿನ್ನ ಬಲಗೈ ಮಾಡಿದ್ದು ಎಡಗೈಗೂ ತಿಳಿಯದಿರಲಿ. 4ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
5ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 6ಆದರೆ ನೀನು ಪ್ರಾರ್ಥನೆಮಾಡಬೇಕಾದರೆ ನಿನ್ನ ಏಕಾಂತವಾದ ಕೋಣೆಯೊಳಗೆ ಹೋಗಿ ಬಾಗಲನ್ನು ಮುಚ್ಚಿಕೊಂಡು ಅಂತರಂಗದಲ್ಲಿಯೂ ಇರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 7ಆದರೆ ಪ್ರಾರ್ಥನೆಮಾಡುವಾಗ ಅಜ್ಞಾನಿಗಳ ಹಾಗೆ ಹೇಳಿದ್ದನ್ನೇ ಸುಮ್ಮಸುಮ್ಮನೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ನೆನಸುತ್ತಾರೆ. 8ಆದದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವದಕ್ಕಿಂತ ಮುಂಚೆಯೇ ನಿಮಗೆ ಏನೇನು ಅಗತ್ಯವೆಂಬದು ಆತನಿಗೆ ತಿಳಿದದೆ. 9ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -
10ಪರಲೋಕದಲ್ಲಿರುವ ನಮ್ಮ ತಂದೆಯೇ,
ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
11ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.
12ನಮಗೆ#6.12 ಮೂಲ: ನಮ್ಮ ಸಾಲಗಾರರನ್ನು. ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು#6.12 ಮೂಲ: ಸಾಲಗಳನ್ನು. ಕ್ಷವಿುಸು.
13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ#6.13 ಅಥವಾ: ಕೆಡುಕನಿಂದ ಅಂದರೆ, ಸೈತಾನನಿಂದ. ನಮ್ಮನ್ನು ತಪ್ಪಿಸು.#6.13 ಕೆಲವು ಪ್ರತಿಗಳಲ್ಲಿ ಮುಂದಣ ಮಾತುಗಳು ಅವೆ - ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿನ್ನವೇ. ಆಮೆನ್; 1 ಪೂರ್ವ. 29.11 ನೋಡಿರಿ.
14ನೀವು ಜನರ ತಪ್ಪುಗಳನ್ನು ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷವಿುಸುವನು. 15ಆದರೆ ನೀವು ಜನರ ತಪ್ಪುಗಳನ್ನು ಕ್ಷವಿುಸದೆಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷವಿುಸುವದಿಲ್ಲ.
16ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳಕೋ. 18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
19ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. 20ಆದರೆ ಪರಲೋಕದಲ್ಲಿ ಗಂಟು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವದೂ ಇಲ್ಲ, ಕದಿಯುವದೂ ಇಲ್ಲ. 21ನಿನ್ನ ಗಂಟು ಇದ್ದಲ್ಲಿಯೇ ನಿನ್ನ ಮನಸ್ಸೂ ಇರುವದಷ್ಟೆ.
22ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವಲ್ಲಿ ನಿನ್ನ ಕಣ್ಣು ನೆಟ್ಟಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವದು. 23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!
24ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ#6.24 ಅಥವಾ: ಅಲಕ್ಷ್ಯ ಮಾಡಿ. ರೋಮ. 9.13 ನೋಡಿರಿ. ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ#6.24 ಮೂಲ: ಮಮೋನನ್ನೂ. ಕೂಡ ಸೇವಿಸಲಾರಿರಿ.
25ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ. 26ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? 27ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು#6.27 ಅಂದರೆ: ಆಯಸ್ಸು ಹೆಚ್ಚು ಮಾಡಿಕೊಳ್ಳುವದು. ನಿಮ್ಮಲ್ಲಿ ಯಾರಿಂದಾದೀತು? 28ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ; 29ಆದಾಗ್ಯೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. 30ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ. 31ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ. 32ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ. 33ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. 34ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು.

Highlight

Share

Copy

None

Want to have your highlights saved across all your devices? Sign up or sign in