ಮತ್ತಾಯ 7:21-22
ಮತ್ತಾಯ 7:21-22 KANJV-BSI
ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು. ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.