ಮಾರ್ಕ 11
11
ಯೇಸು ಅರಸನಂತೆ ಯೆರೂಸಲೇವಿುನಲ್ಲಿ ಪ್ರವೇಶಮಾಡಿದ್ದು
(ಮತ್ತಾ. 21.1-9; ಲೂಕ. 19.29-38; ಯೋಹಾ. 12.12-16)
1ಅವರು ಯೆರೂಸಲೇವಿುಗೆ ಸಮೀಪಿಸಿ ಎಣ್ಣೇಮರಗಳ ಗುಡ್ಡದ ಬಳಿಯಲ್ಲಿರುವ ಬೇತ್ಪಗೆಗೂ ಬೇಥಾನ್ಯಕ್ಕೂ ಬಂದಾಗ 2ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಕ್ಕೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ. 3ಯಾವನಾದರೂ ನಿಮ್ಮನ್ನು - ಏನು ಹೀಗೆ ಮಾಡುವದು ಎಂದು ಕೇಳಿದರೆ - ಇದು ಸ್ವಾವಿುಯವರಿಗೆ ಬೇಕಾಗಿದೆ, ಅವರು ತಡಮಾಡದೆ ತಿರಿಗಿ ಇಲ್ಲಿಗೆ ಕಳುಹಿಸಿಕೊಡುವರು ಅನ್ನಿರಿ ಎಂದು ಹೇಳಿ ಕಳುಹಿಸಿದನು. 4ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಒಂದು ಕತ್ತೇಮರಿ ಕಟ್ಟಿರುವದನ್ನು ಕಂಡು ಅದನ್ನು ಬಿಚ್ಚಿದರು. 5ಅಲ್ಲಿ ನಿಂತಿದ್ದವರಲ್ಲಿ ಕೆಲವರು - ಈ ಮರಿಯನ್ನು ಬಿಚ್ಚಿ ಏನು ಮಾಡುತ್ತೀರಿ? ಎಂದು ಅವರನ್ನು ಕೇಳಿದ್ದಕ್ಕೆ 6ಯೇಸು ಹೇಳಿದಂತೆಯೇ ಅವರು ಹೇಳಿದಾಗ ಆ ಜನರು ತೆಗೆದುಕೊಂಡು ಹೋಗಗೊಡಿಸಿದರು. 7ಶಿಷ್ಯರು ಆ ಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕೂತುಕೊಂಡನು. 8ಆಗ ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಚಿಗುರುಗಳನ್ನು ಕೊಯಿದು ತಂದು ಹಾಸಿದರು. 9ಆತನ ಹಿಂದೆಯೂ ಮುಂದೆಯೂ ಹೋಗುತ್ತಿದ್ದವರು - ಜಯ,#11.9 ಮೂಲ: ಹೊಸನ್ನ; ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; 10ನಮ್ಮ ಪಿತೃವಾದ ದಾವೀದನ ರಾಜ್ಯವು ಬರುತ್ತದೆ, ಅದಕ್ಕೆ ಆಶೀರ್ವಾದ; ಮೇಲಣ ಲೋಕಗಳಲ್ಲಿ ಜಯ#11.10 ಮೂಲ: ಹೊಸನ್ನ; ಎಂದು ಆರ್ಭಟಿಸಿದರು.
11ತರುವಾಯ ಯೇಸು ಯೆರೂಸಲೇಮನ್ನು ಸೇರಿ ದೇವಾಲಯಕ್ಕೆ ಹೋಗಿ ಸುತ್ತಲೂ ಎಲ್ಲಾ ನೋಡಿಕೊಂಡು ಅಷ್ಟರಲ್ಲಿ ಸಂಜೆಯಾದದ್ದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರಕೊಂಡು ಬೇಥಾನ್ಯಕ್ಕೆ ಹೊರಟುಹೋದನು.
ಯೇಸುವಿನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದು; ದೇವಾಲಯದಲ್ಲಿ ವ್ಯಾಪಾರಮಾಡುವವರನ್ನು ಹೊರಡಿಸಿದ್ದು
(ಮತ್ತಾ. 21.12-22; ಲೂಕ. 19.45-48)
12ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನು ಹಸಿದನು. 13ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ. 14ಆಗ ಯೇಸು ಆ ಮರಕ್ಕೆ - ಇನ್ನು ಮೇಲೆ ಒಬ್ಬರೂ ನಿನ್ನಲ್ಲಿ ಹಣ್ಣನ್ನು ಎಂದೆಂದಿಗೂ ತಿನ್ನದ ಹಾಗಾಗಲಿ ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿದರು.
15ಅವರು ಯೆರೂಸಲೇವಿುಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಳ್ಳುವವರನ್ನೂ ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿದನು; 16ಒಬ್ಬನನ್ನಾದರೂ ಸಾಮಾನು ಹೊತ್ತುಕೊಂಡು ದೇವಾಲಯದೊಳಗೆ ಹಾದು ಹೋಗಗೊಡಿಸಲಿಲ್ಲ. 17ಮತ್ತು ಆತನು ಉಪದೇಶಮಾಡಿ - ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದಿದೆಯಲ್ಲಾ? ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು. 18ಅದನ್ನು ಮಹಾಯಾಜಕರೂ ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಸಂದರ್ಭ ನೋಡುತ್ತಿದ್ದರು; ಯಾಕಂದರೆ ಜನರೆಲ್ಲಾ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.
19ಪ್ರತಿಸಾಯಂಕಾಲ ಯೇಸುವೂ ಆತನ ಶಿಷ್ಯರೂ ಪಟ್ಟಣವನ್ನು ಬಿಟ್ಟು ಹೊರಗೆ ಹೋಗುತ್ತಿದ್ದರು.
20ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು. 21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಸಿಕೊಂಡು ಆತನಿಗೆ - ಗುರುವೇ, ಇಗೋ, ನೀನು ಶಾಪಕೊಟ್ಟ ಅಂಜೂರದ ಮರವು ಒಣಗಿಹೋಗಿದೆ ಎಂದು ಹೇಳಿದ್ದಕ್ಕೆ 22ಯೇಸು ಹೇಳಿದ್ದೇನಂದರೆ - ನಿಮಗೆ ದೇವರಲ್ಲಿ ನಂಬಿಕೆಯಿರಲಿ. 23ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ - ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವದು. 24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವದೆಂದು ನಿಮಗೆ ಹೇಳುತ್ತೇನೆ. 25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.#11.25 ಕೆಲವು ಪ್ರತಿಗಳಲ್ಲಿ 26ನೆಯ ವಚನ ಉಂಟು - ಆದರೆ ನೀವು ಕ್ಷವಿುಸಿಬಿಡದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನು ಕ್ಷವಿುಸಿಬಿಡುವದಿಲ್ಲ. ಮತ್ತಾ. 6.14, 15; 18.35 ನೋಡಿರಿ.
ಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ವಿಚಾರಿಸಿದಾಗ ಆತನು ತಕ್ಕ ಉತ್ತರಕೊಟ್ಟು ಅವರು ಮಾಡಿದ ದೈವದ್ರೋಹವನ್ನು ಸಾಮ್ಯದಿಂದ ಸೂಚಿಸಿದ್ದು
(ಮತ್ತಾ. 21.23-46; ಲೂಕ. 20.1-19)
27ಅವರು ತಿರಿಗಿ ಯೆರೂಸಲೇವಿುಗೆ ಬಂದಾಗ ಆತನು ದೇವಾಲಯದಲ್ಲಿ ತಿರುಗಾಡುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು - 28ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವದಕ್ಕೆ ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಆತನನ್ನು ಕೇಳಿದರು. 29ಯೇಸು ಅವರಿಗೆ - ನಾನು ನಿಮ್ಮನ್ನೂ ಒಂದು ಮಾತು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನು ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬದನ್ನು ನಿಮಗೆ ಹೇಳುತ್ತೇನೆ. 30ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ? ಮನುಷ್ಯರಿಂದ ಬಂತೋ? ಉತ್ತರಕೊಡಿರಿ ಅಂದನು. 31ಆಗ ಅವರು - ಪರಲೋಕದಿಂದ ಬಂತೆಂದು ನಾವು ಹೇಳಿದರೆ ಹಾಗಾದರೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು; 32ಮನುಷ್ಯರಿಂದ ಬಂತೆಂದು ಹೇಳಿದರೆ ಏನಾಗುವದೋ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು. ಯೋಹಾನನು ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳುಕೊಂಡಿದ್ದದರಿಂದ ಇವರಿಗೆ ಜನರ ಭಯವಿತ್ತು. 33ಹೀಗಿರಲಾಗಿ ಅವರು - ನಾವು ಅರಿಯೆವು ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ - ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಅಂದನು.
Currently Selected:
ಮಾರ್ಕ 11: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.