ಮಾರ್ಕ 15
15
ಪಿಲಾತನು ಯೇಸುವನ್ನು ವಿಚಾರಿಸಿ ಆತನಲ್ಲಿ ಅಪರಾಧವಿಲ್ಲವೆಂದು ಕಂಡರೂ ಆತನನ್ನು ಮರಣದಂಡನೆಗೆ ಒಪ್ಪಿಸಿದ್ದು
(ಮತ್ತಾ. 27.1,2,11-26; ಲೂಕ. 23.1-25; ಯೋಹಾ. 18.28—19.16)
1ಬೆಳಗಾದ ಕೂಡಲೆ ಮಹಾಯಾಜಕರೂ ಹಿರಿಯರೂ ಶಾಸ್ತ್ರಿಗಳೂ ಹಿರೀಸಭೆಯವರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು. 2ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಲು ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. 3-4ಮಹಾಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು. ಆಗ ಪಿಲಾತನು ಇನ್ನೊಂದಾವರ್ತಿ ಆತನನ್ನು - ನೀನು ಏನೂ ಉತ್ತರಕೊಡುವದಿಲ್ಲವೇ? ಇವರು ನಿನ್ನ ಮೇಲೆ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು. 5ಆದರೆ ಯೇಸು ಇನ್ನೇನೂ ಉತ್ತರಕೊಡಲಿಲ್ಲ. ಅದನ್ನು ನೋಡಿ ಪಿಲಾತನು ಆಶ್ಚರ್ಯಪಟ್ಟನು.
6ಅವನು ಆ ಹಬ್ಬದಲ್ಲಿ ಜನರು ಬೇಡಿದ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು. 7ಆಗ ಬರಬ್ಬನೆಂಬವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆಪಾತಕ ಮಾಡಿದ ದಂಗೆಗಾರರ ಕೂಡ ಕಟ್ಟಿಹಾಕಿದ್ದರು. 8ಜನರು ಪಿಲಾತನ ಬಳಿಗೆ ಹೋಗಿ - ನೀನು ನಮಗೆ ಮಾಡುತ್ತಾ ಬಂದ ಪ್ರಕಾರ ಮಾಡು ಎಂದು ಬೇಡಿಕೊಳ್ಳುತ್ತಿದ್ದರು. 9-10ಮಹಾಯಾಜಕರು ಹೊಟ್ಟೇಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು - ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟು ಕೊಡಬೇಕನ್ನುತ್ತೀರೋ ಎಂದು ಅವರನ್ನು ಕೇಳಿದನು. 11ಅತ್ತಲಾಗಿ ಮಹಾಯಾಜಕರು - ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬದಾಗಿ ಜನರನ್ನು ಪ್ರೇರೇಪಿಸಿದರು. 12ಅದಕ್ಕೆ ಪಿಲಾತನು ತಿರಿಗಿ ಅವರನ್ನು - ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ ಎಂದು ಕೇಳಲು ಅವರು - 13ಅವನನ್ನು ಶಿಲುಬೆಗೆ ಹಾಕಿಸು ಎಂದು ತಿರಿಗಿ ಬೊಬ್ಬೆಹಾಕಿದರು. 14ಪಿಲಾತನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು. 15ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
ಯೇಸುವನ್ನು ಪರಿಹಾಸ್ಯಮಾಡಿ ಶಿಲುಬೆಗೆ ಹಾಕಿದ್ದು; ಆತನು ಪ್ರಾಣಬಿಟ್ಟದ್ದು
(ಮತ್ತಾ. 27.27-56; ಲೂಕ. 23.26-49; ಯೋಹಾ. 19.17-30)
16ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಗೆ ಸೇರಿದ ಅಂಗಳದೊಳಕ್ಕೆ ಸಾಗಿಸಿಕೊಂಡುಹೋಗಿ ಪಟಾಲಮನ್ನೆಲ್ಲಾ ಒಟ್ಟಿಗೆ ಕರೆದು 17ಆತನಿಗೆ ಕೆಂಪು ಒಲ್ಲಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನಿಗಿಟ್ಟು - 18ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ ಎಂದು ಆತನಿಗೆ ವಂದನೆಮಾಡಿ 19ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು ಆತನ ಮೇಲೆ ಉಗುಳಿ ಆತನ ಮುಂದೆ ಮೊಣಕಾಲೂರಿ ಅಡ್ಡಬಿದ್ದರು. 20ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ಒಲ್ಲಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕೆ ತೆಗೆದುಕೊಂಡು ಹೋದರು.
21ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು. ಇವನು ಯಾರಂದರೆ - ಅಲೆಕ್ಸಾಂದ್ರ ರೂಫ ಎಂಬವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು. 22ಬಳಿಕ ಆತನನ್ನು ಗೊಲ್ಗೊಥಾ ಎಂಬ ಸ್ಥಳಕ್ಕೆ ಕರಕೊಂಡು ಬಂದರು. ಗೊಲ್ಗೊಥಾ ಅಂದರೆ ಕಪಾಲಸ್ಥಳ. 23ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ತೆಗೆದುಕೊಳ್ಳಲಿಲ್ಲ. 24ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವ ಯಾವದು ಯಾರಾರಿಗೆ ಆಗಬೇಕೆಂದು ಚೀಟುಹಾಕಿ ಪಾಲುಮಾಡಿಕೊಂಡರು. 25ಆತನನ್ನು ಶಿಲುಬೆಗೆ ಹಾಕುವಾಗ ಹೊತ್ತಾರೆ#15.25 ಮೂಲ: ಮೂರು ತಾಸಾಗಿತ್ತು. ಒಂಭತ್ತು ಗಂಟೆಯಾಗಿತ್ತು. 26ಇದಲ್ಲದೆ ಅವರು ಹೊರಿಸಿದ ಅಪರಾಧವನ್ನು ಸೂಚಿಸುವ ಒಂದು ವಿಳಾಸವು ಶಿಲುಬೆಯ ಮೇಲೆ ಬರೆದಿತ್ತು; ಅದೇನಂದರೆ - ಯೆಹೂದ್ಯರ ಅರಸನು ಎಂಬದೇ. 27ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು. 29ಅಲ್ಲಿ#15.29 28ನೆಯ ವಚನವು ಮೂಲಗ್ರಂಥದ ಹೆಚ್ಚು ಪ್ರತಿಗಳಲ್ಲಿ ಇಲ್ಲ. ಅದು ಯಾವದಂದರೆ - ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು ಎಂಬ ಶಾಸ್ತ್ರವಚನವು ಹೀಗೆ ನೆರವೇರಿತು ಎಂಬದು. ಯೆಶಾ. 53.12; ಲೂಕ. 22.37 ನೋಡಿರಿ. ಹಾದುಹೋಗುವವರು ತಲೇ ಆಡಿಸಿ ಆಹಾ, ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, 30ಶಿಲುಬೆಯಿಂದ ಇಳಿದು ನಿನ್ನನ್ನು ರಕ್ಷಿಸಿಕೋ ಎಂದು ಆತನನ್ನು ಹಂಗಿಸುತ್ತಿದ್ದರು. 31ಅದೇ ಮೇರೆಗೆ ಮಹಾಯಾಜಕರೂ ಶಾಸ್ತ್ರಿಗಳೂ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ತನ್ನನ್ನು ರಕ್ಷಿಸಿಕೊಳ್ಳಲಾರನು. 32ಇಸ್ರಾಯೇಲ್ಯರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದುಬಂದರೆ ನಾವು ನೋಡಿ ನಂಬೇವು ಎಂದು ತಮ್ಮತಮ್ಮೊಳಗೆ ಹಾಸ್ಯದಿಂದ ಮಾತಾಡುತ್ತಿದ್ದರು. ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.
33ಮಧ್ಯಾಹ್ನವಾದಾಗ ದೇಶದ ಮೇಲೆಲ್ಲಾ ಕತ್ತಲೆ ಕವಿದು ಸಾಯಂಕಾಲ#15.33 ಮೂಲ: ಒಂಭತ್ತು ತಾಸಿನ ತನಕ. ಮೂರು ಗಂಟೆಯ ತನಕ ಇತ್ತು. 34ಮೂರು ಗಂಟೆಗೆ ಯೇಸು - ಎಲೋಹಿ, ಎಲೋಹಿ, ಲಮಾ ಸಬಕ್ತಾನೀ ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ ಎಂದು ಮಹಾಧ್ವನಿಯಿಂದ ಕೂಗಿದನು. 35ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ - ಎಲೀಯನನ್ನು ಕರೆಯುತ್ತಾನೆ ಕಾಣಿರೋ, ಅಂದರು. 36ಆಗ ಒಬ್ಬನು ಓಡಿಹೋಗಿ ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟು - ಬಿಡಿರಿ, ಎಲೀಯನು ಇವನನ್ನು ಇಳಿಸುವದಕ್ಕೆ ಬರುವನೇನೋ ನೋಡೋಣ ಅಂದನು. 37ಆದರೆ ಯೇಸು ಮಹಾಧ್ವನಿಯನ್ನು ಗೈದು ಪ್ರಾಣಬಿಟ್ಟನು. 38ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು. 39ಆತನು ಹೀಗೆ ಪ್ರಾಣಬಿಟ್ಟದ್ದನ್ನು ಆತನ ಹತ್ತಿರ ಎದುರಿಗೆ ನಿಂತಿದ್ದ ಶತಾಧಿಪತಿಯು ನೋಡಿ - ನಿಜವಾಗಿ ಈ ಮನುಷ್ಯನು ದೇವಕುಮಾರನಾಗಿದ್ದನು ಅಂದನು. 40-41ಇದಲ್ಲದೆ ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು; ಇವರಲ್ಲಿ, ಆತನು ಗಲಿಲಾಯದಲ್ಲಿದ್ದಾಗ ಆತನನ್ನು ಹಿಂಬಾಲಿಸಿ ಸೇವೆ ಮಾಡುತ್ತಿದ್ದವರಾದ ಮಗ್ದಲದ ಮರಿಯ, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯ, ಸಲೋಮೆ ಎಂಬವರೂ ಆತನ ಸಂಗಡ ಯೆರೂಸಲೇವಿುಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರೂ ಇದ್ದರು.
ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು
(ಮತ್ತಾ. 27.57-61; ಲೂಕ. 23.50-56; ಯೋಹಾ. 19.38-42)
42ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ಸೌರಣೆಯ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನ ಆಗಿತ್ತು. 43ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು. 44ಪಿಲಾತನು - ಅವನು ಇಷ್ಟು ಬೇಗ ಸತ್ತನೋ ಎಂದು ಆಶ್ಚರ್ಯಪಟ್ಟು ಶತಾಧಿಪತಿಯನ್ನು ಕರೆಸಿ - ಅವನು ಆಗಲೇ ಸತ್ತನೋ ಎಂದು ಅವನನ್ನು ಕೇಳಿ 45ಆತನು ಸತ್ತದ್ದನ್ನು ಶತಾಧಿಪತಿಯಿಂದ ತಿಳಿದು ಶವವನ್ನು ಯೋಸೇಫನಿಗೆ ಕೊಡಿಸಿದನು. 46ಯೋಸೇಫನು ನಾರು ಮಡಿಯನ್ನು ಕೊಂಡುತಂದು ಆತನನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು. 47ಮಗ್ದಲದ ಮರಿಯಳೂ ಯೋಸೆಯ ತಾಯಿ ಮರಿಯಳೂ ಆತನನ್ನಿಡುವ ಸ್ಥಳವನ್ನು ನೋಡಿದರು.
Currently Selected:
ಮಾರ್ಕ 15: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.