YouVersion Logo
Search Icon

ಮಾರ್ಕ 3

3
1ಇನ್ನೊಂದು ಸಮಯದಲ್ಲಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದವನೊಬ್ಬನಿದ್ದನು. 2ಅವರು ಆತನ ಮೇಲೆ ತಪ್ಪುಹೊರಿಸಬೇಕೆಂದು ಆಲೋಚಿಸಿ ಸಬ್ಬತ್‍ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚಿನೋಡುತ್ತಾ ಇದ್ದರು. 3ಆತನು ಕೈಬತ್ತಿದ್ದವನಿಗೆ - ಎದ್ದು ನಡುವೆ ಬಾ ಎಂದು ಹೇಳಿ ಅವರಿಗೆ - 4ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ತೆಗೆಯುವದೋ? ಎಂದು ಹೇಳಲು ಅವರು ಸುಮ್ಮನಿದ್ದರು. 5ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು. 6ಫರಿಸಾಯರು ಹೊರಕ್ಕೆ ಹೋಗಿ ಕೂಡಲೆ ಹೆರೋದ್ಯರನ್ನು ಕೂಡಿಕೊಂಡು ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಯೇಸು ವಿಂಗಡವಾಗಿ ಹೋಗಿ ಹನ್ನೆರಡು ಮಂದಿ ಅಪೊಸ್ತಲರನ್ನು ನೇವಿುಸಿದ್ದು
(ಮತ್ತಾ. 10.1-4; ಲೂಕ. 6.12-19)
7ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು. 8ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ ಯೆರೂಸಲೇವಿುನಿಂದಲೂ ಇದೂಮಾಯದಿಂದಲೂ ಯೊರ್ದನ್ ಹೊಳೆಯ ಆಚೆಯಿಂದಲೂ ತೂರ್ ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು. 9ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು. 10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಆತನನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು. 11ಮತ್ತು ದೆವ್ವಗಳು ಆತನನ್ನು ಕಂಡಾಗೆಲ್ಲಾ ಆತನ ಪಾದಕ್ಕೆ ಬಿದ್ದು - ನೀನು ದೇವಕುಮಾರನೆಂದು ಕೂಗುತ್ತಿದ್ದವು. 12ಆದರೆ ಆತನು ತಾನು ಇಂಥವನೆಂಬದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಹೇಳಿದನು.
13ಆಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಹನ್ನೆರಡು ಮಂದಿಯನ್ನು ಆರಿಸಿ ಅವರು ತನ್ನ ಸಂಗಡ ಇರಬೇಕೆಂತಲೂ 15ದೆವ್ವಗಳನ್ನು ಬಿಡಿಸುವ ಅಧಿಕಾರವುಳ್ಳವರಾಗಿ ಸುವಾರ್ತೆಯನ್ನು ಸಾರುವದಕ್ಕೆ ತಾನು ಅವರನ್ನು ಕಳುಹಿಸುವೆನೆಂತಲೂ ಆ ಹನ್ನೆರಡು ಮಂದಿಯನ್ನು ಆರಿಸಿ ನೇವಿುಸಿದನು. 16ಸೀಮೋನನೆಂಬವನಿಗೆ ಪೇತ್ರನೆಂದು ಹೆಸರನ್ನು ಇಟ್ಟನು. 17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಗುಡುಗಿನ ಮರಿಗಳು ಎಂದು ಹೆಸರಿಟ್ಟನು. 18ಉಳಿದವರು ಯಾರಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, 19ಯೇಸುವನ್ನು ಹಿಡುಕೊಟ್ಟ ಇಸ್ಕರಿಯೋತ ಯೂದ, ಇವರೇ.
ಯೇಸುವಿನ ವೈರಿಗಳು ಆತನನ್ನು ದೂಷಿಸಿದ್ದು; ಆತನ ಸ್ವಂತ ಜನರು ಆತನ ವಿಷಯವಾಗಿ ಅನುಮಾನಪಟ್ಟದ್ದು
(ಮತ್ತಾ. 12.22-32,46-50; ಲೂಕ. 11.14-22, 8.19-21)
20ಆತನು ಮನೆಯೊಳಗೆ ಬಂದಾಗ ಜನರು ತಿರಿಗಿ ನೆರೆದದ್ದರಿಂದ ಊಟಕ್ಕೂ ಅವಕಾಶವಾಗಲಿಲ್ಲ. 21ಇದನ್ನು ಕೇಳಿ ಆತನ ಬಂಧುಗಳು ಅವನಿಗೆ ಹುಚ್ಚುಹಿಡಿದದೆ ಎಂದು ಹೇಳಿ ಆತನನ್ನು ಹಿಡಿಯುವದಕ್ಕೆ ಹೊರಟರು. 22ಇದಲ್ಲದೆ ಯೆರೂಸಲೇವಿುನಿಂದ ಬಂದಿದ್ದ ಶಾಸ್ತ್ರಿಗಳು - ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ ಹೇಳುತ್ತಿದ್ದರು. 23ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ - ಸೈತಾನನು ಸೈತಾನನನ್ನು ಬಿಡಿಸುವದುಂಟೇ? 24ಒಂದು ರಾಜ್ಯದಲ್ಲಿ ಭೇದಹುಟ್ಟಿದರೆ ಆ ರಾಜ್ಯವು ಉಳಿಯಲಾರದು; 25ಒಂದು ಮನೆಯಲ್ಲಿ ಭೇದಹುಟ್ಟಿದರೆ ಆ ಮನೆಯು ನಿಲ್ಲಲಾರದು. 26ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ಭೇದ ಹುಟ್ಟಿಸಿಕೊಂಡರೆ ಅವನು ನಿಲ್ಲಲಾರದೆ ನಾಶವಾಗಿ ಹೋಗುವನು. 27ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದಕ್ಕಾಗುವದಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು. 28-30ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.
31ಜನರು ಆತನ ಸುತ್ತಲು ಕೂತುಕೊಂಡಿದ್ದಾಗ ಆತನ ತಾಯಿಯೂ ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇ ಕಳುಹಿಸಿದರು. 32ಆ ಜನರು ಆತನಿಗೆ - ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿರುತ್ತಾರೆ ನೋಡು ಎಂದು ಹೇಳಿದ್ದಕ್ಕೆ 33ಆತನು ಅವರಿಗೆ - ನನಗೆ ತಾಯಿಯೂ ತಮ್ಮಂದಿರೂ ಯಾರು? ಎಂದು ಹೇಳಿ 34ತನ್ನ ಸುತ್ತಲು ಕೂತಿದ್ದವರನ್ನು ನೋಡಿ - ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. 35ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.

Currently Selected:

ಮಾರ್ಕ 3: KANJV-BSI

Highlight

Share

Copy

None

Want to have your highlights saved across all your devices? Sign up or sign in