ಫಿಲಿಪ್ಪಿಯವರಿಗೆ 2:5-11
ಫಿಲಿಪ್ಪಿಯವರಿಗೆ 2:5-11 KANJV-BSI
ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಆದದರಿಂದ ಸ್ವರ್ಗ ಮರ್ತ್ಯಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಅಡ್ಡಬಿದ್ದು ಯೇಸು ಕ್ರಿಸ್ತನನ್ನು ಒಡೆಯನೆಂದು ಪ್ರತಿಜ್ಞೆಮಾಡಿ ತಂದೆಯಾದ ದೇವರಿಗೆ ಘನವನ್ನು ಸಲ್ಲಿಸುವರು.