ಕೀರ್ತನೆಗಳು 21
21
ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ದಾವೀದನ ಕೀರ್ತನೆ
1ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ;
ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ.
3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ;
ಅವನ ತಲೆಯ ಮೇಲೆ ಸುವರ್ಣಕಿರೀಟವನ್ನು ಇಟ್ಟಿದ್ದೀ.
4ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು
ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
5ನಿನ್ನ ರಕ್ಷಣಕಾರ್ಯದಿಂದ ಅವನ ಘನತೆಯು ಬಹು ವೃದ್ಧಿಯಾಯಿತು;
ಮಹಿಮಪ್ರಭಾವಗಳನ್ನು ಅವನಿಗೆ ಬರಮಾಡಿದ್ದೀ.
6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ;
ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದ ಪಡಿಸಿದ್ದೀ.
7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ;
ಪರಾತ್ಪರನ ಕೃಪೆಯ ದೆಸೆಯಿಂದ ಅವನು ಕದಲುವದೇ ಇಲ್ಲ.
8ಶತ್ರುಗಳೆಲ್ಲರು ನಿನಗೆ ಸಿಕ್ಕುವರು;
ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
9ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿಮಾಡುವಿ.
ಯೆಹೋವನು ಮಹಾಕೋಪದಿಂದ ಅವರನ್ನು ನಾಶಮಾಡುವನು;
ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವದು.
10ನೀನು ಅವರನ್ನು ಸಂಹರಿಸಿ ಭೂವಿುಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ;
ಅವರ ವಂಶದವರು ಮನುಷ್ಯರೊಳಗೆ ಉಳಿಯುವದೇ ಇಲ್ಲ.
11ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ
ಅದು ನಡೆಯುವದಿಲ್ಲ.
12ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ ಅವರ ಮುಖಗಳ ಮೇಲೆ ಎಸೆದು
ಅವರು ಬೆನ್ನು ತೋರಿಸಿ ಓಡಿಹೋಗುವಂತೆ ಮಾಡುವಿ.
13ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಪ್ರಸಿದ್ಧಿಪಡಿಸಿಕೋ;
ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
Currently Selected:
ಕೀರ್ತನೆಗಳು 21: KANJV-BSI
Highlight
Share
Copy

Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.