YouVersion Logo
Search Icon

ಕೀರ್ತನೆಗಳು 28

28
ಕಷ್ಟದಲ್ಲಿದ್ದ ಭಕ್ತನು ಪ್ರಾರ್ಥಿಸಿ ರಕ್ಷಣೆಹೊಂದಿ ಸ್ತುತಿಸುವದು ದಾವೀದನ ಕೀರ್ತನೆ
1ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ.
ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2ನೀನು ವಾಸಿಸುವ ಮಹಾಪರಿಶುದ್ಧ ಸ್ಥಾನದ ಕಡೆಗೆ ನಾನು ಕೈಯೆತ್ತಿಕೊಂಡು ಮೊರೆಯಿಡುತ್ತೇನಲ್ಲಾ;
ನನ್ನ ವಿಜ್ಞಾಪನೆಯನ್ನು ಲಾಲಿಸು.
3ನೀನು ದುಷ್ಟರೊಡನೆಯೂ ಪಾತಕಿಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ.
ಅವರು ಹೊರಗೆ ಒಳ್ಳೇದಾಗಲಿ ಎಂದು ಹೇಳಿದರೂ ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು;
ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
5ಅವರು ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು;
ಆದದರಿಂದ ಆತನು ಅವರನ್ನು ಹಾಳು ಮಾಡುವನೇ ಹೊರತು ವೃದ್ಧಿಪಡಿಸುವದಿಲ್ಲ.
6ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ;
ಆತನಿಗೆ ಸ್ತೋತ್ರವಾಗಲಿ.
7ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
8ಯೆಹೋವನು ತನ್ನ ಜನರಿಗೆ ಬಲವೂ
ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9[ಯೆಹೋವನೇ,] ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು.
ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.

Highlight

Share

Copy

None

Want to have your highlights saved across all your devices? Sign up or sign in

Videos for ಕೀರ್ತನೆಗಳು 28