ಕೀರ್ತನೆಗಳು 43
43
1ದೇವರೇ, ನ್ಯಾಯವನ್ನು ನಿರ್ಣಯಿಸು;
ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ#43.1 ಅಥವಾ: ಭಕ್ತಿಹೀನ. ಜನಾಂಗದಿಂದ ತಪ್ಪಿಸು,
ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.
2ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಯಾಕೆ ನನ್ನನ್ನು ತಳ್ಳಿಬಿಟ್ಟಿ?
ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?
3ನಿನ್ನ ಸತ್ಯಪ್ರಸನ್ನತೆಗಳನ್ನು [ದೂತರನ್ನೋ ಎಂಬಂತೆ] ಕಳುಹಿಸು;
ಅವೇ ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಸೇರಿಸಲಿ.
4ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ, ಸೇರಿ
ಕಿನ್ನರಿಯನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.
5ನನ್ನ ಮನವೇ, ನೀನು ಕುಗ್ಗಿಹೋಗಿರುವದೇನು? ಹೀಗೆ ವ್ಯಥೆಪಡುವದೇಕೆ?
ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ;
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
Currently Selected:
ಕೀರ್ತನೆಗಳು 43: KANJV-BSI
Highlight
Share
Copy

Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.