ಜೆಕರ್ಯ 5
5
ಹಾರುವ ಸುರಳಿಯ ಕನಸು
1ಪುನಃ ನಾನು ಕಣ್ಣೆತ್ತಿ ನೋಡಲು ಇಗೋ, ಹಾರುತ್ತಿರುವ ಒಂದು ಸುರಳಿಯು ಕಾಣಿಸಿತು. 2ಅವನು ನನ್ನನ್ನು - ನಿನಗೆ ಏನು ಕಾಣಿಸುತ್ತಿದೆ ಎಂದು ಕೇಳಿದ್ದಕ್ಕೆ - ಹಾರುತ್ತಿರುವ ಒಂದು ಸುರಳಿಯು ಕಾಣಿಸುತ್ತದೆ; ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದುತ್ತರ ಕೊಟ್ಟೆನು. 3ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು. 4ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.
ಕೊಳಗದೊಳಗಣ ಹೆಂಗಸಿನ ವಿಷಯವಾದ ಕನಸು
5ಅನಂತರ ವಿವರಿಸುವ ದೂತನು ಹತ್ತಿರ ಬಂದು - ಕಂಡುಬರುತ್ತಿರುವ ಆ ವಸ್ತು ಏನೆಂದು ನೋಡು ಎಂಬದಾಗಿ ನನಗೆ ಹೇಳಲು ನಾನು - 6ಏನದು ಎಂದು ಕೇಳಿದ್ದಕ್ಕೆ ಅವನು - ಕಂಡುಬರುತ್ತಿರುವ ಆ ವಸ್ತು ಒಂದು ಕೊಳಗಪಾತ್ರೆ ಎಂದು ತಿಳಿಸಿದನು. ಅಲ್ಲದೆ - ಅದು ಪೂರ್ಣದೇಶದಲ್ಲಿನ ಪಾಪಿಗಳ ಅಧರ್ಮವೇ#5.6 ಪಾಠಾಂತರ: ಸ್ವರೂಪವೇ. ಅಂದನು. 7ಇಗೋ, ತಟ್ಟೆಯಾಕಾರವಾದ ಸೀಸದ ಮುಚ್ಚಳವು ಎತ್ತಲ್ಪಡಲಾಗಿ ಆಹಾ, ಒಬ್ಬ ಹೆಂಗಸು ಕೊಳಗದೊಳಗೆ ಕೂತಿದ್ದಳು. 8ಅವನು ಕಂಡು - ಇವಳು ಪಾಪಮೂರ್ತಿ ಎಂದು ಹೇಳಿ ಅವಳನ್ನು ಕೊಳಗದೊಳಗೆ ಅದುವಿು ಸೀಸದ ಭಾರಿ ಮುಚ್ಚಳವನ್ನು ಅದರ ಬಾಯಿಗೆ ಹಾಕಿಬಿಟ್ಟನು. 9ನಾನು ಕಣ್ಣೆತ್ತಿನೋಡಲು ಆಹಾ, ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು; ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು; ಅವರು ಪೀಪಾಯಿಯನ್ನು ಭೂಮ್ಯಾಕಾಶಗಳ ಅಂತರಾಳದಲ್ಲಿ ಎತ್ತಿಕೊಂಡು ಹೋದರು. 10ಅವರು ಕೊಳಗವನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ ಎಂದು ನನಗೆ ವಿವರಿಸುವ ದೇವದೂತನನ್ನು ನಾನು ಕೇಳಿದ್ದಕ್ಕೆ 11ಅವನು ನನಗೆ - ಶಿನಾರ್ ದೇಶದಲ್ಲಿ ಅವಳಿಗೆ ಮನೆಕಟ್ಟುವದಕ್ಕಾಗಿ ಹೋಗುತ್ತಾರೆ; ಅದು ಸಿದ್ಧವಾದಾಗ ಆ ಸ್ವಂತ ಸ್ಥಳದಲ್ಲಿ ನಿಲ್ಲಿಸಲ್ಪಡುವಳು.
Currently Selected:
ಜೆಕರ್ಯ 5: KANJV-BSI
Highlight
Share
Copy
Want to have your highlights saved across all your devices? Sign up or sign in
Kannada J.V. Bible © The Bible Society of India, 2016.
Used by permission. All rights reserved worldwide.