ಲೂಕ 8:22-25
ಲೂಕ 8:22-25 KANJV-BSI
ಒಂದಾನೊಂದು ದಿನದಲ್ಲಿ ಆತನು ತನ್ನ ಶಿಷ್ಯರ ಸಂಗಡ ಒಂದು ದೋಣಿಯನ್ನು ಹತ್ತಿ ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಅವರಿಗೆ ಹೇಳಲು ಅವರು ದೋಣಿಯನ್ನು ನೀರಿನೊಳಗೆ ನೂಕಿ ಹೊರಟರು. ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು. ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು. ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.