ಯೆಜೆಕಿಯೇಲನು 1:10-11
ಯೆಜೆಕಿಯೇಲನು 1:10-11 KANCLBSI
ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು. ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.