ಮಲಾಕಿಯ 4
4
ದೇವರ ದಿನ
1“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. 2“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ. 3ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
4“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”
5“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು. 6ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”
Currently Selected:
ಮಲಾಕಿಯ 4: KANCLBSI
Highlight
Share
Copy
Want to have your highlights saved across all your devices? Sign up or sign in
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.