ಮತ್ತಾಯ 6:16-18
ಮತ್ತಾಯ 6:16-18 KANCLBSI
“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ. ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ. ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”