YouVersion Logo
Search Icon

1 ಸಮು 19:9-10

1 ಸಮು 19:9-10 IRVKAN

ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು. ಅವನು ಒಡನೆ ಕಿನ್ನರಿಯನ್ನು ನುಡಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಪಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ, ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.