YouVersion Logo
Search Icon

1 ಸಮು 21

21
ದಾವೀದನು ನೋಬಕ್ಕೆ ಹೋದದ್ದು
1ದಾವೀದನು #21:1 ನೆಹೆ 11:32; ಯೆಶಾ 10:32.ನೋಬ್ ಊರಲ್ಲಿದ್ದ #21:1 ಮಾರ್ಕ 2:26. ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು, “ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ, ನೀನು ಒಬ್ಬನೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು. 2ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ. 3ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಎಂದನು. 4ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ #21:4 ವಿಮೋ 25:30; ಮತ್ತಾ 12:3; ಯಾಜ 24:5-9; ಲೂಕ 6:3,4.ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು. 5ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು 6#21:6 ಯಾಜ 24:8,9.ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ #21:6 ವಿಮೋ 25:30.ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು. 7ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ #21:7 ಕೀರ್ತ 52.ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು. 8ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು. 9ಅವನು, “ನೀನು ಏಲಾ ತಗ್ಗಿನಲ್ಲಿ ಕೊಂದು ಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು, #21:9 ನ್ಯಾಯ 8:27. ಏಫೋದಿನ ಹಿಂದೆ ಇಡಲ್ಪಟ್ಟಿದೆ. ಬೇಕಾದರೆ ಅದನ್ನು ತೆಗೆದುಕೊ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ. ಅದನ್ನೇ ಕೊಡು” ಎಂದು ಹೇಳಿ ತೆಗೆದುಕೊಂಡನು.
ದಾವೀದನು ಗತ್ ಊರಿಗೆ ಓಡಿಹೋದದ್ದು
10ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು. 11ಆಕೀಷನ ಸೇವಕರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದನು, ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು ಎಂಬುದಾಗಿ ಸ್ತ್ರೀಯರು ಕುಣಿಯುತ್ತಾ ಹಾಡಿದ್ದು ಇವನ ಕುರಿತಲ್ಲವೋ?” ಎಂದು ಮಾತನಾಡಿಕೊಂಡರು. 12ದಾವೀದನು #21:12 ಲೂಕ 2:19; ಮೀಕ. 1:15.ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ, 13ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು. 14ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವುದಿಲ್ಲವೋ, ಇವನನ್ನು ನನ್ನ ಹತ್ತಿರ ಯಾಕೆ ಕರೆತಂದಿರಿ? 15ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು.

Currently Selected:

1 ಸಮು 21: IRVKan

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy