1 ಸಮು 9
9
ಸೌಲ ಮತ್ತು ಸಮುವೇಲರ ಭೇಟಿ
1ಬೆನ್ಯಾಮೀನ್ ಕುಲದಲ್ಲಿ #9:1 1ಪೂರ್ವ 9:39.ಕೀಷನೆಂಬ ಒಬ್ಬ ಐಶ್ವರ್ಯವಂತ ಮತ್ತು ಪ್ರಭಾವಶಾಲಿಯಾದ ಮನುಷ್ಯನಿದ್ದನು. ಕೀಷನು ಅಬೀಯೇಲನ ಮಗ, ಅಬೀಯೇಲನು ಚೆರೋರನ ಮಗ, ಬೆಕೋರತನ ಮೊಮ್ಮಗ ಹಾಗೂ ಅಫೀಹನ ಮರಿಮಗನು. 2ಕೀಷನಿಗೆ ಸೌಲನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಈ ಸೌಲನು ಯೌವನಸ್ಥನೂ, ಎಲ್ಲಾ ಇಸ್ರಾಯೇಲ್ಯರಲ್ಲಿ ಅತಿಸುಂದರನೂ ಆಗಿದ್ದನು. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾಗಿದ್ದನು. 3ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ತಪ್ಪಿಸಿಕೊಂಡು ಹೋದುದರಿಂದ ಅವನು ತನ್ನ ಮಗನಾದ ಸೌಲನಿಗೆ, “ನೀನೆದ್ದು ಆಳುಗಳಲ್ಲಿ ಒಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕುವುದಕ್ಕೆ ಹೋಗು” ಎಂದು ಹೇಳಿದನು. 4ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, #9:4 2 ಅರಸು. 4:42.ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ. 5ಕಡೆಗೆ ಅವರು ಚೂಫ್ ದೇಶಕ್ಕೆ ಬಂದಾಗ ಸೌಲನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡಿ; ನಮ್ಮ ತಂದೆಯು ಈಗ ಕತ್ತೆಗಳ ಚಿಂತೆ ಬಿಟ್ಟು ನಮ್ಮ ಚಿಂತೆಯಲ್ಲಿರಬಹುದು” ಅಂದನು 6ಆದರೆ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ #9:6 ಧರ್ಮೋ 33:1.ಒಬ್ಬ ದೇವರ ಮನುಷ್ಯನಿರುತ್ತಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗತಕ್ಕ ಮಾರ್ಗವನ್ನು ತಿಳಿಸುವನು” ಎಂದನು. 7ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ #9:7 1 ಅರಸು. 14:3ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು 8ಆಳು, “ಇಗೋ, ನನ್ನ ಕೈಯಲ್ಲಿ #9:8 ಪಾವಲಿ ಎಂದರೆ ಒಂದು ಬೆಳ್ಳಿ ನಾಣ್ಯದ ಕಾಲು ಭಾಗ.ಒಂದು ಪಾವಲಿಯಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು” ಎಂದು ಉತ್ತರಕೊಟ್ಟನು. 9(ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ #9:9 ಆದಿ 25:22.ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ #9:9 1ಪೂರ್ವ 29:30.ದೇವದರ್ಶಿಗಳೆಂದು ಕರೆಯುತ್ತಿದ್ದರು.) 10ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು; ಹೋಗೋಣ ನಡಿ” ಅಂದನು. 11ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ; 12ಈ ಹೊತ್ತು ನಮ್ಮ ಊರಿನವರು #9:12 1 ಅರಸು. 3:2-4.ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ. 13ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು. 14ಅವರು ಮೇಲೆ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೋಗುವುದಕ್ಕೋಸ್ಕರ ಹೊರಟು ಅವರೆದುರಿಗೆ ಬಂದನು.
15ಸೌಲನು ಬರುವುದಕ್ಕೆ ಒಂದು ದಿನ ಮುಂದಾಗಿ ಯೆಹೋವನು ಸಮುವೇಲನಿಗೆ, 16“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. #9:16 ವಿಮೋ 3:7, 9.ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು. 17ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು. 18ಊರಬಾಗಿಲಿಗೆ ಬಂದ ಸೌಲನು ತನ್ನ ಎದುರಿನಲ್ಲಿ ಸಮುವೇಲನನ್ನು ನೋಡಿ, “ದರ್ಶಿಯ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿಯೋ?” ಎನ್ನಲು ಸಮುವೇಲನು, “ನಾನೇ ಆ ದರ್ಶಿ. 19ನೀನು ನನ್ನ ಜೊತೆಯಲ್ಲಿ ಗುಡ್ಡಕ್ಕೆ ಬಾ; ನೀವು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ್ನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು. 20ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು. 21ಅದಕ್ಕೆ ಸೌಲನು, “ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? #9:21 ನ್ಯಾಯ 20:46.ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ?” ಎಂದನು. 22ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು; ಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ, 23“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು” ಅಂದನು. 24ಅವನು #9:24 ಯಾಜ 7:32-33.ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು. 25ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ #9:25 ಮಾಳಿಗೆಯ ಮೇಲೆ ಸೌಲನಿಗಾಗಿ ಮಂಚವನ್ನು ಸಿದ್ಧಪಡಿಸಲಾಗಿತ್ತು ಅವನು ಅದರ ಮೇಲೆ ಮಲಗಿದ್ದನು.ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
26ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಕಳುಹಿಸಿ ಕೊಡುತ್ತೇನೆ” ಎಂದು ಎಬ್ಬಿಸಲು ಅವನು ಎದ್ದನು. ತರುವಾಯ ಅವರಿಬ್ಬರೂ ಹೊರಟು ಊರ ಹೊರಗೆ ಬಂದಾಗ 27ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು.
Currently Selected:
1 ಸಮು 9: IRVKan
Highlight
Share
Copy
Want to have your highlights saved across all your devices? Sign up or sign in
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.