YouVersion Logo
Search Icon

ಆಮೋ 8

8
ಮಾಗಿದ ಹಣ್ಣಿನ ದರ್ಶನ
1ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಇಗೋ, ಮಾಗಿದ ಹಣ್ಣಿನ#8:1 ಮಾಗಿದ ಹಣ್ಣಿನ ಅತ್ತಿಹಣ್ಣು. ಪುಟ್ಟಿಯನ್ನು ಕಂಡೆನು! 2ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು,
“ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ.
ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.
3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು”
ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ,
“ಆಗ ಹೆಣಗಳು ಹೆಚ್ಚುವವು,
ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”
ಧನವಂತರ ಹಣದಾಸೆ ಮುಂದಿನ ದೌರ್ಭಾಗ್ಯ
4“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು?
ಧಾನ್ಯವನ್ನು ಮಾರಬೇಕಲ್ಲಾ;
ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು?
ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ;
ಕೊಳಗವನ್ನು ಕಿರಿದುಮಾಡೋಣ;
ಬಡವರನ್ನು ನುಂಗುವವರೇ,
ತೊಲವನ್ನು ಹೆಚ್ಚಿಸೋಣ;
ಸುಳ್ಳು ತಕ್ಕಡಿಯಿಂದ ಮೋಸಮಾಡೋಣ;
ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
5ಬಡವರನ್ನು ಬೆಳ್ಳಿಗೂ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಗಳ ಜೋಡಿಗೂ ಕೊಂಡುಕೊಳ್ಳೋಣ;
ಗೋದಿಯ ನುಚ್ಚುನ್ನು ಮಾರಿಬಿಡೋಣ” ಎಂದು ಹೇಳುತ್ತೀರಿ ಅಲ್ಲವೇ?
6ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ,
ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!
7ಯೆಹೋವನು ಯಾಕೋಬಿನ ಮಹಿಮೆಯ ಮೇಲೆ ಹೀಗೆ ಆಣೆಯಿಟ್ಟಿದ್ದಾನೆ, “ಖಂಡಿತವಾಗಿ ಅವರ ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ಮರೆತುಬಿಡುವುದಿಲ್ಲ”
8ಆ ಕೃತ್ಯಗಳಿಗೆ ದೇಶವು ನಡುಗಬೇಕಾಗುವುದಲ್ಲವೇ,
ಅದರ ನಿವಾಸಿಗಳೆಲ್ಲರೂ ದುಃಖಿಸುವರಲ್ಲವೇ?
ದೇಶವೆಲ್ಲಾ ನೈಲ್ ನದಿಯಂತೆ ಉಬ್ಬಿ ಅಲ್ಲಕಲ್ಲೋಲವಾಗುವುದು,
ಐಗುಪ್ತದ ನದಿಯ ಹಾಗೆಯೇ,
ಇಳಿದು ಹೋಗುವುದು.
9ಆ ದಿನದಲ್ಲಿ
ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
“ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು,
ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.
10ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು
ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು.
ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು,
ತಲೆಬೋಳಿಸಿಕೊಳ್ಳುವಂತೆ ಮಾಡುವೆನು.
ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು,
ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
11ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ,
“ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ,
ಅದು ಅನ್ನದ ಕ್ಷಾಮವಲ್ಲ,
ನೀರಿನ ಕ್ಷಾಮವಲ್ಲ,
ಯೆಹೋವನ ವಾಕ್ಯಗಳ ಕ್ಷಾಮವೇ.
12ಸಮುದ್ರದಿಂದ ಸಮುದ್ರಕ್ಕೆ;
ಉತ್ತರದಿಂದ ಪೂರ್ವಕ್ಕೂ ಬಳಲುತ್ತಾ ಹೋಗುವರು
ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು,
ಆದರೂ ಅದು ಸಿಕ್ಕುವುದಿಲ್ಲ.
13ಆ ದಿನದಲ್ಲಿ ಸುಂದರವಾದ ಯುವತಿಯರೂ
ಮತ್ತು ಯೌವನಸ್ಥರು ಸಹ ಬಾಯಾರಿಕೆಯಿಂದ ಮೂರ್ಛೆ ಹೋಗುವರು.
14‘ದಾನೇ, ನಿನ್ನ ದೇವರ ಜೀವದಾಣೆ’ ಎಂದೂ
‘ಮತ್ತು ಬೇರ್ಷೆಬದ ಮಾರ್ಗದ#8:14 ಬೇರ್ಷೆಬದ ಮಾರ್ಗದ ಅಂದರೆ ವಿಗ್ರಹಗಳನ್ನು ಆರಾಧಿಸುವುದು. ಜೀವದಾಣೆ’” ಎಂದೂ ಹೇಳುವರು.
ಅವರು ಸಮಾರ್ಯದ ಪಾಪದ ಮೇಲೆ ಪ್ರಮಾಣಮಾಡಿಕೊಂಡು,
ಅವರು ಬಿದ್ದು ಮತ್ತೆ ಮೇಲೆ ಏಳಲಾರರು.

Currently Selected:

ಆಮೋ 8: IRVKan

Highlight

Share

Copy

None

Want to have your highlights saved across all your devices? Sign up or sign in

Free Reading Plans and Devotionals related to ಆಮೋ 8

YouVersion uses cookies to personalize your experience. By using our website, you accept our use of cookies as described in our Privacy Policy