YouVersion Logo
Search Icon

ವಿಮೋ 10:13-14

ವಿಮೋ 10:13-14 IRVKAN

ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು. ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.