YouVersion Logo
Search Icon

ವಿಮೋ 12:12-13

ವಿಮೋ 12:12-13 IRVKAN

ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು. ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.