YouVersion Logo
Search Icon

ವಿಮೋ 15:23-25

ವಿಮೋ 15:23-25 IRVKAN

ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು. ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು. ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. ಆಗ ಯೆಹೋವನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಯಿತು. ಅಲ್ಲಿ ಯೆಹೋವನು ಇಸ್ರಾಯೇಲರಿಗಾಗಿ ಒಂದು ನಿಯಮವನ್ನು ಮಾಡಿ ಅವರನ್ನು ಪರೀಕ್ಷಿಸಿದನು.