ವಿಮೋ 17:6-7
ವಿಮೋ 17:6-7 IRVKAN
ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು. ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.