ವಿಮೋ 32:7-8
ವಿಮೋ 32:7-8 IRVKAN
ಹೀಗಿರಲಾಗಿ ಯೆಹೋವನು ಮೋಶೆಗೆ, “ನೀನು ಬೆಟ್ಟದಿಂದ ಇಳಿದುಹೋಗು ಐಗುಪ್ತದೇಶದಿಂದ ನೀನು ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.