ವಿಮೋ 7:9-10
ವಿಮೋ 7:9-10 IRVKAN
“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು. ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.