YouVersion Logo
Search Icon

ಆದಿ 28:20-22

ಆದಿ 28:20-22 IRVKAN

ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು, ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು. ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.