ಆದಿ 39:7-9
ಆದಿ 39:7-9 IRVKAN
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು. ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ. ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.