ನ್ಯಾಯ 3
3
ದೇಶದಲ್ಲಿ ಉಳಿದ ಅನ್ಯಜನಾಂಗಗಳು
1ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ, 2ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ, 3#3:3 ಯೆಹೋ. 13: 2-6 ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ. 4ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು. 5#3:5 ವಿಮೋ 3:8ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ, 6ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
ಒತ್ನೀಯೇಲ್
7ಇಸ್ರಾಯೇಲರು ಬಾಳ್, #3:7 ವಿಮೋ 34:13ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು. 8ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು #3:8 ಅಂದರೆ ಮೆಸಪೋತಾಮ್ಯ, ಆದಿ 24:10; 25:20.ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ #3:8 ಹಬ 3:7ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು. 9ಇಸ್ರಾಯೇಲರು #3:9 ನ್ಯಾಯ 4:3ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ #3:9 ನೆಹೆ 9:27ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ #3:9 ನ್ಯಾಯ 1:13ಒತ್ನೀಯೇಲನೇ ಆ ರಕ್ಷಕನು. 10#3:10 ನ್ಯಾಯ 11:29ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು. 11ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
ಏಹೂದ
12ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ #3:12 1 ಸಮು 12. 9.ವಿರೋಧವಾಗಿ ಬಲಪಡಿಸಿದನು. 13ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು. 14ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು. 15ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು. 16ಅವನು ತನಗೋಸ್ಕರ ಒಂದು ಗುದ್ದುಮೊಳ#3:16 ಗುದ್ದುಮೊಳ ಒಂದುವರೆ ಅಡಿ. ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ 17ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ. 18ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು, 19ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು. 20ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು. 21ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು. 22ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; #3:22 ಕತ್ತಿಯ ಮೊನಚಾದ ತುದಿಯು ಬೆನ್ನಿನಿಂದ ಹೊರಗೆ ಬಂದಿತ್ತು.ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು. 23ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು. 24ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು 25ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು. 26ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು, 27ಎಫ್ರಾಯೀಮ್ ಪರ್ವತಪ್ರದೇಶದಲ್ಲಿ #3:27 1 ಸಮು 13:3ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು. 28ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; #3:28 1 ಸಮು 17:47ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ #3:28 ಯೆಹೋ. 2:7ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ. 29ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು. 30ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
ಶಮ್ಗರ್
31ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.
Currently Selected:
ನ್ಯಾಯ 3: IRVKan
Highlight
Share
Copy

Want to have your highlights saved across all your devices? Sign up or sign in
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.