ಯೋಬ 2:11-13
ಯೋಬ 2:11-13 IRVKAN
ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು. ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು. ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.