ಯೋವೇ 3:15-16
ಯೋವೇ 3:15-16 IRVKAN
ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ. ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.