ಲೂಕ 4:9-12
ಲೂಕ 4:9-12 IRVKAN
ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು. ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು; ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು. ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.