ಲೂಕ 5:12-13
ಲೂಕ 5:12-13 IRVKAN
ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.