ಲೂಕ 7:7-9
ಲೂಕ 7:7-9 IRVKAN
ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು. ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.