YouVersion Logo
Search Icon

ಮತ್ತಾ 16

16
ಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದು
ಮಾರ್ಕ 9:11-21
1ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು. 2#16:2 ಕೆಲವು ಪ್ರತಿಗಳಲ್ಲಿ 2 ನೆಯ 3 ನೆಯ ವಚನಗಳು ಇಲ್ಲ. ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ. 3ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ? 4#16:4 ಅಂದರೆ ದೇವದ್ರೋಹಿಯಾದ. ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು
5ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು. 6ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ #16:6 1 ಕೊರಿ 5:6-8; ಗಲಾ. 5:9. ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು. 7ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 8ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ? 9ಆ ಐದು ರೊಟ್ಟಿಗಳನ್ನು #16:9 ಮತ್ತಾ 14:17-21. ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ? 10ಇಲ್ಲವೆ ಆ #16:10 ಮತ್ತಾ 15:34-38:ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ? 11ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು. 12ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
ಮಾರ್ಕ 8:27-29; ಲೂಕ 9:18-21
13ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು. 14ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು. 15ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?” 16ಆಗ ಸೀಮೋನ ಪೇತ್ರನು, #16:16 ಮತ್ತಾ 27:54; ಯೋಹಾ 6:69. “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು. 17ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು. 18ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು #16:18 ಮೂಲ: ಪತ್ರೊಸ್, ಅಂದರೆ ಬಂಡೆ ಅಥವಾ ಕಲ್ಲು. ಪೇತ್ರನು, ಈ #16:18 ಮೂಲ: ಪೇತ್ರಾ, ಅಂದರೆ ವಿಸ್ತಾರವಾದ ಬಂಡೆ; ಎಫೆ 2:20. ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. 19ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. #16:19 ಮತ್ತಾ 18:18; ಯೋಹಾ 20:23:ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು. 20ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದು
ಮಾರ್ಕ 8:31-9:1; ಲೂಕ 9:22-27
21ಅಂದಿನಿಂದ #16:21 ಕೆಲವು ಪ್ರತಿಗಳಲ್ಲಿ ಯೇಸು ಕ್ರಿಸ್ತನೆಂಬ ಪದವಿದೆ. ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು. 22ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು. 23ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು. 24ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ #16:24 ಮತ್ತಾ 10:38, 39; ಲೂಕ 14:27; 17:33; ಯೋಹಾ 12:25:“ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 25ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 26ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು? 27ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
28 “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.

Currently Selected:

ಮತ್ತಾ 16: IRVKan

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy