YouVersion Logo
Search Icon

ಪ.ಗೀ. 2

2
ನಲ್ಲ
1ನಾನು ಶಾರೋನಿನ#2:1 ಶಾರೋನಿನ ಶಾರೋನ್: ಇಸ್ರಾಯೇಲಿನ ಮೆಡಿಟರೇನಿಯನ್ ಕರಾವಳಿ ಪ್ರಾಂತ್ಯವನ್ನು ಸೂಚಿಸುವ ಸ್ಥಳದ ಹೆಸರಾಗಿದೆ (ಯೆಶಾ 35:2; 65:10). ಆದರೆ ಪದ ವಾಸ್ತವವಾದ ಅರ್ಥವೇನೆಂದರೆ ಬಯಲು ಅಥವಾ ವಿಶಾಲ ಮತ್ತು ಸಮತಟ್ಟಾದ ಮೇಲ್ಮೈ ಪ್ರದೇಶ. ನೆಲಸಂಪಿಗೆ,
ತಗ್ಗಿನ ತಾವರೆ.
2ಸ್ತ್ರೀಯರಲ್ಲಿ ಶ್ರೇಷ್ಠಳು ನೀನು,
ನನ್ನ ಪ್ರಿಯಳು ಮುಳ್ಳುಗಳ ಮಧ್ಯದಲ್ಲಿರುವ ತಾವರೆಯಂತಿರುವಳು.
ನಲ್ಲೆ
3ನನ್ನ ಪ್ರಿಯನು ಪುರುಷೋತ್ತಮನು
ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು.
ಅದರ ಫಲವು ನನ್ನ ನಾಲಿಗೆಗೆ ಸುಮಧುರ
ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.
4ಬರಮಾಡಿಕೊಂಡನು ನನ್ನನ್ನು ಔತಣಶಾಲೆಗೆ,
ನನ್ನ ಮೇಲೆತ್ತಿದನು ಪ್ರೀತಿ ಎಂಬ ಪತಾಕೆ.
5ಅಸ್ವಸ್ಥಳಾಗಿರುವೆನು ಅನುರಾಗದಿಂದ,
ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ,
ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.
6ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ,
ಆತನ ಬಲಗೈ ನನ್ನನ್ನು ಆಲಂಗಿಸಿದರೆ ನನಗೆ ಪರಮಾನಂದ!
7ಯೆರೂಸಲೇಮಿನ ಮಹಿಳೆಯರೇ,
ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ,
ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು
ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಎರಡನೆಯ ಗೀತೆ - ನಲ್ಲೆ
8ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ,
ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;
9ನನ್ನ ಪ್ರಿಯನು ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇದ್ದಾನೆ.
ಆಹಾ, ಇಗೋ ನಮ್ಮ ಗೋಡೆಯ ಆಚೆ ನಿಂತು,
ಕಿಟಕಿಗಳ ಮೂಲಕ ನೋಡುತ್ತಾನೆ,
ಜಾಲಾಂದ್ರಗಳ ಮೂಲಕ ಇಣಿಕುಹಾಕುತ್ತಾನೆ!
ನಲ್ಲ
10ನನ್ನ ನಲ್ಲನು ನನಗೆ ಹೀಗೆಂದನು,
“ನನ್ನ ಪ್ರಿಯತಮೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
11ಇಗೋ, ಚಳಿಗಾಲ ಕಳೆಯಿತು, ಮಳೆಗಾಲ ಮುಗಿಯಿತು;
12ಭೂಮಿಯಲ್ಲೆಲ್ಲಾ ಹೂವುಗಳು ಕಾಣುತ್ತವೆ, ಕುಡಿ ಸವರುವ ಕಾಲ ಬಂತು,
ಬೆಳವಕ್ಕಿಯ ಕೂಗು ದೇಶದಲ್ಲಿ ಕೇಳಿಸುತ್ತದೆ;
13ಅಂಜೂರದ ಕಾಯಿಗಳು ಹಣ್ಣಾಗಿವೆ,
ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ.
ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!
14ಬಂಡೆಯ ಬಿರುಕುಗಳಲ್ಲಿಯೂ,
ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ!
ನಿನ್ನ ರೂಪವನ್ನು ನನಗೆ ತೋರಿಸು,
ನಿನ್ನ ಧ್ವನಿಯನ್ನು ಕೇಳಿಸು;
ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”
15ತೋಟಗಳನ್ನು ಹಾಳುಮಾಡುವ ನರಿಗಳನ್ನು#2:15 ನರಿಗಳನ್ನು “ನರಿಗಳು” ಬಹುಶಃ ಯುವತಿಯರ ಪ್ರೀತಿಗಾಗಿ ಸ್ಪರ್ಧಿಸುವ ಇತರ ಪುರುಷರನ್ನು ಸೂಚಿಸುತ್ತದೆ., ನರಿಮರಿಗಳನ್ನು ಹಿಡಿಯಿರಿ;
ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.
ನಲ್ಲೆ
16ಎನ್ನಿನಿಯನು ನನ್ನವನೇ, ನಾನು ಅವನವಳೇ,
ನೆಲದಾವರೆಗಳ ಮಧ್ಯದಲ್ಲಿ ಮಂದೆಯನ್ನು ಮೇಯಿಸುವವನಾಗಿದ್ದಾನೆ.
17ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ,
ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ
ಪ್ರಾಯದ ಹರಿಣದಂತೆಯೂ ಇರು.

Currently Selected:

ಪ.ಗೀ. 2: IRVKan

Highlight

Share

Copy

None

Want to have your highlights saved across all your devices? Sign up or sign in