YouVersion Logo
Search Icon

ಪ.ಗೀ. 7

7
ನಲ್ಲ
1ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ!
ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.
2ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು,
ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ.
3ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.
4ನಿನ್ನ ಕೊರಳು ದಂತದ ಗೋಪುರ,
ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ.
ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ.
5ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು,
ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ,
ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.
6ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ
ನೀನೆಷ್ಟು ಸುಂದರ, ನೀನೆಷ್ಟು ಮನೋಹರ!
7ನೀಳವಾದ ನಿನ್ನ ಆಕಾರವು ಖರ್ಜೂರದ ಮರ,
ನಿನ್ನ ಸ್ತನಗಳೇ ಅದರ ಗೊಂಚಲುಗಳು.
8ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು.
ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ,
ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.
ನಲ್ಲೆ
9ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ,#7:9 ಉತ್ತಮ ದ್ರಾಕ್ಷಾರಸದ ಹಾಗಿರಲಿ, ಅಥವಾ ನಿನ್ನ ಬಾಯು ಉತ್ತಮ ದ್ರಾಕ್ಷಾರಸದಂತಿರಲಿ.
ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.
10ನಾನು ನನ್ನ ನಲ್ಲನ ನಲ್ಲೆ,
ಅವನ ಆಶೆಯು ನನ್ನ ಮೇಲೆ.
11ಎನ್ನಿನಿಯನೇ, ವನಕ್ಕೆ ಹೋಗೋಣ ಬಾ,
ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ#7:11 ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ ಅಥವಾ ಅಡವಿಯ ಹೂವುಗಳ ಮಧ್ಯದಲ್ಲಿ ವಾಸಮಾಡುವ.!
12ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ,
ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ,
ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
13ಕಾಮಜನಕ ವೃಕ್ಷಗಳು#7:13 ಕಾಮಜನಕ ವೃಕ್ಷಗಳು ಮ್ಯಾಂಡ್ರೇಕ್ಸ್: ಅತ್ಯಂತ ಸಿಹಿಯಾದ ವಾಸನೆಯ ಹೂವುಗಳುಳ್ಳ, ಲೈಂಗಿಕ ಆಸೆಯನ್ನು ಹುಟ್ಟಿಸುವ ಮತ್ತು ಫಲವತ್ತತೆಯನ್ನು ಉತ್ತೇಜಿಸುವ ಹಣ್ಣನ್ನು ಉತ್ಪತ್ತಿ ಮಾಡುವ ಒಂದು ವೃಕ್ಷವಾಗಿದೆ ಎಂದು ನಂಬಲಾಗಿದೆ (ಆದಿ 30:14-16). ಪರಿಮಳ ಬೀರುತ್ತಿವೆ, ನನ್ನ ಕಾಂತನೇ,
ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು
ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

Currently Selected:

ಪ.ಗೀ. 7: IRVKan

Highlight

Share

Copy

None

Want to have your highlights saved across all your devices? Sign up or sign in