ಅಪೊಸ್ತಲರ ಕಾರ್ಯಗಳು 1:10-11
ಅಪೊಸ್ತಲರ ಕಾರ್ಯಗಳು 1:10-11 KERV
ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು, “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು.