YouVersion Logo
Search Icon

ಅಪೊಸ್ತಲರ ಕಾರ್ಯಗಳು 1:4-5

ಅಪೊಸ್ತಲರ ಕಾರ್ಯಗಳು 1:4-5 KERV

ಒಮ್ಮೆ, ಯೇಸು ಅವರೊಂದಿಗೆ ಊಟ ಮಾಡುತ್ತಿದ್ದಾಗ, ಜೆರುಸಲೇಮನ್ನು ಬಿಟ್ಟುಹೋಗಬಾರದೆಂದು ಅವರಿಗೆ ಹೇಳಿದನು. “ತಂದೆಯು ನಿಮಗೊಂದು ವಾಗ್ದಾನವನ್ನು ಮಾಡಿದ್ದಾನೆ. ನಾನು ಮೊದಲೇ ಅದರ ಬಗ್ಗೆ ನಿಮಗೆ ತಿಳಿಸಿದ್ದೇನೆ. ಈ ವಾಗ್ದಾನವನ್ನು ಸ್ವೀಕರಿಸಿಕೊಳ್ಳಲು ಜೆರುಸಲೇಮಿನಲ್ಲಿ ಕಾದುಕೊಂಡಿರಿ. ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನವಾಗುವುದು” ಎಂದು ಆತನು ಹೇಳಿದನು.