ಅಪೊಸ್ತಲರ ಕಾರ್ಯಗಳು 2:2-4
ಅಪೊಸ್ತಲರ ಕಾರ್ಯಗಳು 2:2-4 KERV
ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು. ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.