ಆದಿಕಾಂಡ 27:28-29
ಆದಿಕಾಂಡ 27:28-29 KERV
ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ. ಎಲ್ಲಾ ಜನರು ನಿನ್ನ ಸೇವೆಮಾಡಲಿ; ಜನಾಂಗಗಳು ನಿನಗೆ ತಲೆಬಾಗಲಿ. ನೀನು ನಿನ್ನ ಸಹೋದರರ ಮೇಲೆ ಆಡಳಿತ ಮಾಡುವೆ. ನಿನ್ನ ತಾಯಿಯ ಗಂಡುಮಕ್ಕಳು ನಿನಗೆ ತಲೆಬಾಗಿ ವಿಧೇಯರಾಗುವರು. ನಿನ್ನನ್ನು ಶಪಿಸುವ ಪ್ರತಿಯೊಬ್ಬನು ಶಾಪಗ್ರಸ್ಥನಾಗುವನು. ನಿನ್ನನ್ನು ಆಶೀರ್ವದಿಸುವ ಪ್ರತಿಯೊಬ್ಬನು ಆಶೀರ್ವದಿಸಲ್ಪಡುವನು.”