ಹಬಕ್ಕೂಕ 2:2-3
ಹಬಕ್ಕೂಕ 2:2-3 KERV
ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ. ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.