ಲೂಕನ ಸುವಾರ್ತೆ 14:28-30
ಲೂಕನ ಸುವಾರ್ತೆ 14:28-30 KERV
“ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು. ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ, ‘ಇವನು ಈ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು. ಆದರೆ ಪೂರೈಸಲು ಅವನಿಂದಾಗಲಿಲ್ಲ’ ಎಂದು ಗೇಲಿ ಮಾಡುವರು.