ಮತ್ತಾಯನ ಸುವಾರ್ತೆ 1:18-19
ಮತ್ತಾಯನ ಸುವಾರ್ತೆ 1:18-19 KERV
ಯೇಸು ಕ್ರಿಸ್ತನ ತಾಯಿ ಮರಿಯಳು. ಯೇಸುವಿನ ಜನನ ಈ ರೀತಿ ಸಂಭವಿಸಿತು: ಮದುವೆಮಾಡಿಕೊಳ್ಳಲು ಯೋಸೇಫನಿಗೂ ಮರಿಯಳಿಗೂ ನಿಶ್ಚಿತಾರ್ಥವಾಗಿತ್ತು. ಆದರೆ ಮದುವೆಗೆ ಮೊದಲೇ ತಾನು ಗರ್ಭಿಣಿಯಾಗಿರುವುದು ಮರಿಯಳಿಗೆ ತಿಳಿದುಬಂತು. ಮರಿಯಳು ಪವಿತ್ರಾತ್ಮನ ಪ್ರಭಾವದಿಂದ ಗರ್ಭಿಣಿಯಾಗಿದ್ದಳು. ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.