ಮತ್ತಾಯನ ಸುವಾರ್ತೆ 2:12-13
ಮತ್ತಾಯನ ಸುವಾರ್ತೆ 2:12-13 KERV
ಆದರೆ ದೇವರು ಜ್ಞಾನಿಗಳಿಗೆ ಕನಸಿನಲ್ಲಿ, “ನೀವು ಹೆರೋದನ ಬಳಿಗೆ ಹಿಂತಿರುಗಿ ಹೋಗಕೂಡದು” ಎಂದು ಎಚ್ಚರಿಸಿದನು. ಆದ್ದರಿಂದ ಅವರು ಬೇರೊಂದು ಮಾರ್ಗದ ಮೂಲಕ ತಮ್ಮ ದೇಶಕ್ಕೆ ಹೊರಟುಹೋದರು. ಜ್ಞಾನಿಗಳು ಹೊರಟುಹೋದ ನಂತರ ಪ್ರಭುವಿನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ಹೆರೋದನು ಮಗುವನ್ನು ಹುಡುಕಲು ಪ್ರಾರಂಭಿಸುವನು. ಅವನು ಮಗುವನ್ನು ಕೊಲ್ಲಬೇಕೆಂದಿದ್ದಾನೆ. ‘ಅಪಾಯವಿಲ್ಲ’ ಎಂದು ನಾನು ನಿನಗೆ ಹೇಳುವ ತನಕ ನೀನು ಈಜಿಪ್ಟಿನಲ್ಲೇ ಇರು” ಎಂದು ಹೇಳಿದನು.