ಮತ್ತಾಯನ ಸುವಾರ್ತೆ 28:12-15
ಮತ್ತಾಯನ ಸುವಾರ್ತೆ 28:12-15 KERV
ಆಗ ಮಹಾಯಾಜಕರು ಹಿರಿಯ ಯೆಹೂದ್ಯರನ್ನು ಭೇಟಿಮಾಡಿ ಚರ್ಚಿಸಿದರು ಮತ್ತು ಸೈನಿಕರಿಗೆ ಹೆಚ್ಚು ಹಣಕೊಟ್ಟು ಅವರಿಂದ ಸುಳ್ಳು ಹೇಳಿಸುವ ಉಪಾಯವನ್ನು ಮಾಡಿದರು. ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ. ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು. ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.