ಮಾರ್ಕನ ಸುವಾರ್ತೆ 6:5-6
ಮಾರ್ಕನ ಸುವಾರ್ತೆ 6:5-6 KERV
ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ. ಆ ಜನರಲ್ಲಿ ನಂಬಿಕೆಯಿಲ್ಲದಿರುವುದನ್ನು ಕಂಡು ಯೇಸುವಿಗೆ ಬಹಳ ಆಶ್ಚರ್ಯವಾಯಿತು. ಬಳಿಕ ಯೇಸು ಆ ಪ್ರದೇಶದ ಇತರ ಹಳ್ಳಿಗಳಿಗೆ ಹೋಗಿ ಉಪದೇಶಿಸಿದನು.