YouVersion Logo
Search Icon

ಜೆಕರ್ಯ 13

13
1ಆದರೆ ಆ ಸಮಯದಲ್ಲಿ ಜೆರುಸಲೇಮಿನಲ್ಲಿ ವಾಸಿಸುವ ಜನರಿಗೂ ದಾವೀದನ ಕುಟುಂಬದವರಿಗೂ ಒಂದು ಹೊಸ ಬುಗ್ಗೆಯ ನೀರು ಚಿಮ್ಮುವದು. ಆ ಬುಗ್ಗೆಯು ಜನರ ಪಾಪಗಳನ್ನು ತೊಳೆದು ಶುದ್ಧಮಾಡುವದಕ್ಕಾಗಿ ಇರುವದು.
ಇನ್ನು ಮುಂದೆ ಸುಳ್ಳು ಪ್ರವಾದಿಗಳಿರುವದಿಲ್ಲ
2ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಆ ಸಮಯದಲ್ಲಿ ಈ ಪ್ರಪಂಚದಲ್ಲಿರುವ ವಿಗ್ರಹಗಳನ್ನೆಲ್ಲಾ ನಾನು ತೆಗೆದುಬಿಡುವೆನು. ಜನರು ಅವುಗಳ ಹೆಸರನ್ನು ತಮ್ಮ ನೆನಪಿಗೆ ತಾರರು. ಸುಳ್ಳು ಪ್ರವಾದಿಗಳನ್ನೂ ಅಶುದ್ಧ ಆತ್ಮಗಳನ್ನೂ ನಾನು ಭೂಮಿಯ ಮೇಲಿಂದ ತೆಗೆದುಬಿಡುವೆನು. 3ಯಾವನಾದರೂ ಪ್ರವಾದಿಸುವದನ್ನು ಮಂದುವರಿಸಿದರೆ ಅವನು ಶಿಕ್ಷೆಗೆ ಗುರಿಯಾಗುವನು. ‘ನೀನು ಯೆಹೋವನ ಹೆಸರಿನಲ್ಲಿ ಸುಳ್ಳನ್ನು ಹೇಳಿರುವೆ. ಆದ್ದರಿಂದ ನೀನು ಸಾಯಲೇಬೇಕು’ ಎಂದು ಅವನ ಸ್ವಂತ ತಂದೆತಾಯಿಗಳು ಅವನಿಗೆ ಹೇಳುವರು. ಅವನ ಸ್ವಂತ ತಂದೆ ತಾಯಿಗಳು ಅವನು ಸುಳ್ಳು ಪ್ರವಾದನೆ ಹೇಳಿದ್ದಕ್ಕೆ ಅವನನ್ನು ಖಡ್ಗದಿಂದ ಕೊಲ್ಲಿಸುವರು. 4ಆ ಸಮಯದಲ್ಲಿ ಪ್ರವಾದಿಗಳು ತಮ್ಮ ದರ್ಶನ, ಪ್ರವಾದನೆಗಳಿಗಾಗಿ ನಾಚಿಕೊಳ್ಳುವರು. ತಾವು ಪ್ರವಾದಿಗಳೆಂದು ತೋರಿಸಿಕೊಳ್ಳಲು ಧರಿಸುವ ಗಡುಸಾದ ಬಟ್ಟೆಗಳನ್ನು ಧರಿಸಿಕೊಳ್ಳುವದಿಲ್ಲ. ಅವರು ಪ್ರವಾದನೆಗಳೆಂದು ಹೇಳುವ ತಮ್ಮ ಸುಳ್ಳುಗಳಿಂದ ಜನರನ್ನು ಮೋಸಪಡಿಸುವದಿಲ್ಲ. 5ಅವನು, ‘ನಾನು ಪ್ರವಾದಿಯಲ್ಲ, ನಾನೊಬ್ಬ ರೈತ. ನಾನು ಬಾಲ್ಯಪ್ರಾಯದಿಂದಲೇ ರೈತನಾಗಿದ್ದೇನೆ’ ಎಂದು ಹೇಳುವನು. 6ಆದರೆ ಬೇರೆ ಜನರು, ‘ಹಾಗಾದರೆ ನಿನ್ನ ಕೈಯಲ್ಲಿ ಗಾಯಗಳೇನು?’ ಎಂದು ಕೇಳಿದಾಗ ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗೆ ಏಟು ಬಿತ್ತು’ ಎಂದು ಅನ್ನುವನು.”
7ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು. 8ದೇಶದ ಮೂರನೇ ಎರಡು ಪಾಲಷ್ಟು ಜನರು ಗಾಯಗೊಂಡು ಸಾಯುವರು. ಒಂದು ಪಾಲಷ್ಟು ಜನರು ಬದುಕಿ ಉಳಿಯುವರು. 9ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”

Currently Selected:

ಜೆಕರ್ಯ 13: KERV

Highlight

Share

Copy

None

Want to have your highlights saved across all your devices? Sign up or sign in

Video for ಜೆಕರ್ಯ 13