YouVersion Logo
Search Icon

ಜೆಕರ್ಯ 6

6
ನಾಲ್ಕು ರಥಗಳು
1ನಾನು ತಿರುಗಿ ಮೇಲಕ್ಕೆ ನೋಡಿದಾಗ ನಾಲ್ಕು ರಥಗಳು ನಾಲ್ಕು ಹಿತ್ತಾಳೆಯ ಪರ್ವತಗಳ ಮಧ್ಯೆ ಓಡುವುದನ್ನು ಕಂಡೆನು. 2ಮೊದಲನೇ ರಥವನ್ನು ಕೆಂಪು ಕುದುರೆಗಳು ಎಳೆಯುತ್ತಿದ್ದವು. ಎರಡನೇ ರಥವನ್ನು ಕಪ್ಪು ಕುದುರೆಗಳು ಎಳೆಯುತ್ತಿದ್ದವು. 3ಬಿಳಿ ಕುದುರೆಗಳು ಮೂರನೇ ರಥವನ್ನೂ ಕೆಂಪು ಮಚ್ಚೆಗಳುಳ್ಳ ಕುದುರೆಗಳು ನಾಲ್ಕನೇ ರಥವನ್ನೂ ಎಳೆಯುತ್ತಿದ್ದವು. 4“ಇವು ಏನನ್ನು ಸೂಚಿಸುತ್ತವೆ?” ಎಂದು ನನ್ನೊಡನೆ ಮಾತನಾಡುತ್ತಿದ್ದ ದೂತನೊಡನೆ ವಿಚಾರಿಸಿದೆನು.
5ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು. 6ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”
7ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು.
8ಆಗ ಯೆಹೋವನು ನನ್ನನ್ನು ಗಟ್ಟಿಯಾಗಿ ಕರೆದು, “ನೋಡು, ಆ ಉತ್ತರ ದಿಕ್ಕಿಗೆ ಹೋಗುತ್ತಿದ್ದ ಆ ಕುದುರೆಗಳು ತಮ್ಮ ಕೆಲಸವನ್ನು ಬಾಬಿಲೋನಿನಲ್ಲಿ ಮುಗಿಸಿವೆ. ಅವು ನನ್ನ ಆತ್ಮವನ್ನು ಶಾಂತಗೊಳಿಸಿವೆ. ಈಗ ನಾನು ಕೋಪಗೊಂಡಿಲ್ಲ.” ಎಂದು ಹೇಳಿದನು.
ಪ್ರಧಾನ ಯಾಜಕನಾದ ಯೆಹೋಶುವನು ಕಿರೀಟ ಹೊಂದುವನು
9ಆಗ ತಿರುಗಿ ನಾನು ಯೆಹೋವನಿಂದ ಸಂದೇಶವನ್ನು ಪಡಕೊಂಡೆನು. 10ಆತನು ಹೇಳಿದ್ದೇನೆಂದರೆ, “ಹೆಲ್ದಾಯ, ತೋಬೀಯ ಮತ್ತು ಯೆದಾಯ ಇವರು ಬಾಬಿಲೋನಿನಿಂದ ಸೆರೆಯಾಳುಗಳಾಗಿ ಬಂದಿರುತ್ತಾರೆ. ಅವರಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿರಿ. 11ಆ ಬೆಳ್ಳಿಬಂಗಾರಗಳಿಂದ ಒಂದು ಕಿರೀಟವನ್ನು ಮಾಡಿ ಯೆಹೋಶುವನ ತಲೆಯ ಮೇಲಿಟ್ಟು ಅವನಿಗೆ ಹೀಗೆ ಹೇಳಿರಿ: (ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಇವನ ತಂದೆ ಯೆಹೋಜಾದಾಕನು.) 12ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ,
“ಕೊಂಬೆ ಎಂಬ ಒಬ್ಬಾತನು ಇದ್ದಾನೆ.
ಆತನು ಬೆಳೆದು ಬಲಿಷ್ಠನಾಗುವನು.
ಆತನು ದೇವಾಲಯವನ್ನು ಕಟ್ಟುವನು.
13ಆತನು ದೇವಾಲಯವನ್ನು ಕಟ್ಟುವನು
ಮತ್ತು ಗೌರವವನ್ನು ಹೊಂದುವನು.
ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು.
ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು.
ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.
14ಜನರು ಸ್ಮರಿಸಿಕೊಳ್ಳುವಂತೆ ಅವರು ಆ ಕಿರೀಟವನ್ನು ಆಲಯದೊಳಗೆ ಇಡುವರು. ಅದು ಹೆಲ್ದಾಯ, ತೋಬೀಯ, ಯೆದಾಯ ಮತ್ತು ಚೆಫನ್ಯನ ಮಗನಾದ ಹೇನ್‌ನಿಗೆ ಘನತೆಯನ್ನು ತರುವುದು.”
15ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.

Currently Selected:

ಜೆಕರ್ಯ 6: KERV

Highlight

Share

Copy

None

Want to have your highlights saved across all your devices? Sign up or sign in

Video for ಜೆಕರ್ಯ 6