ಲೂಕ 13:18-19
ಲೂಕ 13:18-19 KSB
ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.