ಲೂಕ 14:28-30
ಲೂಕ 14:28-30 KSB
“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ? ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.